ಪಂಜಾಬ್, ಮಾ 10 (DaijiworldNews/HR): ಪಂಜಾಬ್ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವ ಕ್ಷೇತ್ರದಿಂದ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಪಂಜಾಬ್ನಲ್ಲಿ ಆಮ್ ಆದ್ಮಿಗೆ 89, ಕಾಂಗ್ರೆಸ್ 17 ಹಾಗೂ ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆಗಳಿಸಿದ್ದು, ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದೆ.
ಪಂಜಾಬ್ ಕಾಂಗ್ರೆಸ್ನ ಸಿಎಂ ಅಭ್ಯರ್ಥಿ ಚರಂಜಿತ್ ಸಿಂಗ್ ಚನ್ನಿ ಕೂಡ ಪಂಜಾಬ್ನ ತಮ್ಮ ಎರಡೂ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಜಯಗಳಿಸಲಿದ್ದಾರೆ.
ಮತ ಎಣಿಕೆ ಕೇಂದ್ರಗಳ ಹೊರಗೆ ಪಕ್ಷದ ಕಚೇರಿ ಸೇರಿದಂತೆ ಹಲವೆಡೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು, ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಒಟ್ಟು 117 ಕ್ಷೇತ್ರಗಳಲ್ಲಿ ಆಪ್ 89 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 17, ಬಿಜೆಪಿ 4 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
117 ಸ್ಥಾನಗಳ ಪೈಕಿ ಅಧಿಕಾರದ ಗದ್ದುಗೆ ಏರಲು 59 ಸ್ಥಾನಗಳ ಅಗತ್ಯವಿದ್ದು, ಈ ಮ್ಯಾಜಿಕ್ ನಂಬರ್ ನ್ನು ದಾಟಿರುವುದರಿಂದ ಆಮ್ ಆದ್ಮಿ ಪಾರ್ಟಿ ಗೆಲುವಿನತ್ತ ದಾಪುಗಾಲಿಡುತ್ತಿದೆ.
ಈ ನಡುವೆ ಪಂಜಾಬ್ ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಗೆ ಈ ಚುನಾವಣಾ ಫಲಿತಾಂಶ ತೀವ್ರ ಮುಖಭಂಗಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವ ಕ್ಷೇತ್ರದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.