ನವದೆಹಲಿ, ಮಾ 10 (DaijiworldNews/HR): ಮುಂಬರುವ 2024ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಬಿಜೆಪಿಯು ಮುನ್ನಡೆ ಸಾಧಿಸಿದೆ.
ಉತ್ತರಾಖಂಡದಲ್ಲಿ48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, 4 ಕ್ಷೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದಾರೆ.
ಇನ್ನು ಮಣಿಪುರದಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಎನ್ಪಿಇಪಿ 6 ಮತ್ತು ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಉತ್ತರಾಖಂಡದ ಬಿಜೆಪಿ ಮುಖಂಡ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹಿನ್ನಡೆ ಅನುಭವಿಸಿದ್ದಾರೆ.