ಬೆಂಗಳೂರು, ಮಾ 10 (DaijiworldNews/HR): ಪ್ರಧಾನಿ ಮೋದಿ ನೇತೃತ್ವದಲ್ಲಿ ಜಾರಿಯಾದ ಕಾರ್ಯಕ್ರಮಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಿಂದ ಸಾಬೀತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೂ ಸಕಾರಾತ್ಮಕ ಪರಿಣಾಮ ಬೀರಲಿದ್ದು,ನವ ಭಾರತ ನಿರ್ಮಾಣದ ಕನಸು ಅನುಷ್ಠಾನಗೊಳ್ಳುತ್ತಿದೆ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಭಾರತದ ಉದ್ದಗಲಕ್ಕೂ ಜನ ಮೆಚ್ಚುಗೆ ಪಡೆದ ಏಕೈಕ ನಾಯಕರಾಗಿದ್ದು, ಚುನಾವಣಾ ಫಲಿತಾಂಶ ಇದನ್ನು ಸಾರಿ ಹೇಳುತ್ತಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ನಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದು ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.