ಡೆಹ್ರಾಡೂನ್, ಮಾ 10 (DaijiworldNews/MS): ಉತ್ತರಾಖಂಡ್ನಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದರೂ, ಒಟ್ಟು 70 ವಿಧಾನಸಭಾ ಕ್ಷೇತ್ರಗಳಿರುವ ಉತ್ತರಾಖಂಡ್ನಲ್ಲಿ ಮಧ್ಯಾಹ್ನದ ವೇಳೆಗೆ ಬಿಜೆಪಿ 48 ಸೀಟ್ ಮುನ್ನಡೆ ಸಾಧಿಸಿದೆ. ಬಿಜೆಪಿ ಗೆಲುವಿನತ್ತ ಹೆಜ್ಜೆ ಇಟ್ಟರೂ, ಮುಖ್ಯಮಂತ್ರಿ ಅಭ್ಯರ್ಥಿ ಪುಷ್ಕರ್ ಸಿಂಗ್ ಧಾಮಿ ಅವರು ಸೋಲು ಕಂಡಿದ್ದಾರೆ.
ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡದ ಹಾಲಿ ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಭುವನ್ ಕಾಪ್ರಿ ವಿರುದ್ಧ 7,000 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.
ಉತ್ತರಾಖಂಡ್ನಲ್ಲಿ ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, 4 ಕ್ಷೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದಾರೆ. ಬಹುಜನ ಸಮಾಜ ಪಕ್ಷ (ಬಿಎಸ್ಪಿ) 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, ಶೇ 4.64ರಷ್ಟು ಮತಗಳನ್ನು ಪಡೆದಿದೆ. ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿತ್ತು. 50 ಶಾಸಕರ ಬೆಂಬಲದೊಂದಿಗೆ ಬಿಜೆಪಿಯ ಪುಷ್ಕರ್ ಸಿಂಗ್ ದಾಮಿ ಅವರು ಮುಖ್ಯಮಂತ್ರಿಯಾಗಿದ್ದರು.