ನವದೆಹಲಿ, ಮಾ 10 (DaijiworldNews/HR): ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶ ಗೆದ್ದವರಿಗೆ ಶುಭಾಶಯಗಳು. ಈ ಚುನಾವಣಾ ಫಲಿತಾಂಶದಿಂದ ನಾವು ಸಾಕಷ್ಟು ವಿಚಾರ ಕಲಿತ್ತಿದ್ದೇವೆ ಎಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಶ್ರಮ ಹಾಗೂ ಸಮರ್ಪಣೆಗೆ ನನ್ನ ಕೃತಜ್ಞತೆಗಳು. ಈ ಫಲಿತಾಂಶದಿಂದ ನಾವು ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದರು.
ಇನ್ನು ಉತ್ತರಪ್ರದೇಶ, ಪಂಜಾಬ್, ಗೋವಾ. ಉತ್ತರಾಖಂಡ್, ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ.