ನವದೆಹಲಿ, ಮಾ. 10 (DaijiworldNews/SM): ಇಂದು ಪ್ರಕಟಗೊಂಡ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ದಾಖಲಿಸಿಕೊಂಡು ಅಧಿಕಾರದ ಗದ್ದುಗೆ ಹಿಡಿಯುತ್ತಿದ್ದು, ಇದು ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕ ಮತದಾರರನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲಾಗಿ ಪಕ್ಷದ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಹಾಗೂ ಮುಂದಿನ 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದಿದ್ದಾರೆ.
2017ರ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ 2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಲು ಹಾದಿ ಸುಗಮವಾಯಿತು.
ಪಂಜಾಬ್ ನಲ್ಲಿ ಪಕ್ಷದ ಬೆಳವಣಿಗೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಸಾಧ್ಯವಾಗಲಿದ್ದು, ಕಾರ್ಯಕರ್ತರಿಗೆ ಅಭಿನಂದೆ ಎಂದು ಪ್ರಧಾನಿ ಹೇಳಿದ್ದಾರೆ.