ಲಕ್ನೋ, ಮಾ 11 (DaijiworldNews/HR): ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) 100 ಸ್ಥಾನಗಳ ಪೈಕಿ 99ರಲ್ಲಿ ಠೇವಣಿ ಕಳೆದುಕೊಂಡಿದೆ.
ಮುಸ್ಲಿಂ ಜನಸಂಖ್ಯೆ ಮತ್ತು ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಎಐಎಂಐಎಂ ಪಕ್ಷ ತನ್ನ ಹೆಚ್ಚಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೂಡ ಎಐಎಂಐಎಂ ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ ಬಹುತೇಕ ಎಲ್ಲಾ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು.
ಇನ್ನು 2022 ರ ವಿಧಾನಸಭಾ ಚುನಾವಣೆಯಲ್ಲಿ, ಸ್ಪರ್ಧಿಸಿದ ಬಹುತೇಕ ಎಲ್ಲಾ ಸ್ಥಾನಗಳ ಎಐಎಂಐಎಂ ಅಭ್ಯರ್ಥಿಗಳು ತಮ್ಮ ಠೇವಣಿ ಕಳೆದುಕೊಂಡಿದ್ದು, ಪಕ್ಷದ ವಕ್ತಾರ ವಾರಿಸ್ ಪಠಾಣ್, ಉತ್ತರ ಪ್ರದೇಶದಲ್ಲಿ ಪಕ್ಷವು ಬೆಳೆಯುತ್ತಿದೆ ಎಂದು ಹೇಳಿದ್ದಾರೆ.
2017ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ವಲ್ಪ ಉತ್ತಮ ಪ್ರದರ್ಶನವಾಗಿದ್ದು, 2017 ರಲ್ಲಿ, ಎಐಎಂಐಎಂ ಪಕ್ಷವು 38 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು