ಶ್ರೀನಗರ, ಮಾ 11 (DaijiworldNews/HR): ಉತ್ತರ ಕಾಶ್ಮೀರದ ಗುರೆಜ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಗಡಿ ಭದ್ರತಾ ಪಡೆಯ ಸಿಬ್ಬಂದಿಯನ್ನು ಕರೆದೊಯ್ಯಲು ತೆರಳುತ್ತಿದ್ದ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಘಟನೆ ನಡೆದಿದೆ.
ಹೆಲಿಕಾಪ್ಟರ್ ಇಳಿಯಲು ಹೊರಟಿದ್ದು, ಆ ಸಮಯದಲ್ಲಿ ಹವಾಮಾನ ಪರಿಸ್ಥಿತಿಯಿಂದಾಗಿ ದೂರ ಸರಿದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ಹೆಲಿಕಾಪ್ಟರ್ನಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಇದ್ದರೂ ಅವರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾದರೂ, ಈ ಬಗ್ಗೆ ಸೇನಾ ಅಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡಿಲ್ಲ.