ದೆಹಲಿ, ಮಾ 12 (DaijiworldNews/HR): ದೆಹಲಿಯ ಗೋಕುಲಪುರಿಯಲ್ಲಿ ಶುಕ್ರವಾರ ರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 7 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಖಚಿತ ಮಾಹಿತಿ ತಿಳಿದ ತಕ್ಷಣ 13 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಈ ವೇಳೆ 7 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದು, ಸದ್ಯ ಬೆಂಕಿ ಹತೋಟಿಗೆ ಬಂದಿದೆ.
ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ನಾನೇ ಸ್ವತಃ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸಂತ್ರಸ್ತರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ.