ಕಲಬುರಗಿ, ಮಾ 12 (DaijiworldNews/HR): ಕಾಂಗ್ರೆಸ್ ತೊರೆದಿರುವ ಶಾಸಕರು ಮತ್ತೆ ಬಂದ್ರೆ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನೇ ಮಾಡಿಲ್ಲ. ಇನ್ನು ಅವಧಿಗೂ ಮುನ್ನ ವಿಧಾನಸಭೆ ಚುನಾವಣೆ ಮಾಡ್ತಾರಾ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿನ ಭಿನ್ನಾಭಿಪ್ರಾಯದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯ ಪಕ್ಷಗಳಲ್ಲಿ ಇದೆಲ್ಲಾ ಇರುತ್ತೆ. ಬಿಜೆಪಿಯಲ್ಲೂ ಆಂತರಿಕ ಭಿನ್ನಾಭಿಪ್ರಾಯ ಇದೆ. ಸಿಎಂ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ಮಾತನಾಡಿದ್ದರು. ಇವೆಲ್ಲಾ ಬಿಜೆಪಿ ಆತಂರಿಕ ಭಿನ್ನಾಭಿಪ್ರಾ ಅಲ್ವಾ? ಎಂದಿದ್ದಾರೆ.