ಕಠ್ಮಂಡು, ಮಾ 11 (DaijiworldNews/DB): ಯುದ್ದಗ್ರಸ್ಥ ಉಕ್ರೇನ್ ನಲ್ಲಿ ಸಂಕಷ್ಟದಲ್ಲಿದ್ದ ನೇಪಾಳಿ ಪ್ರಜೆಗಳನ್ನು ರಕ್ಷಿಸಿದ್ದಕ್ಕಾಗಿ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇಬಾ ಅವರು ಭಾರತಕ್ಕೆಧನ್ಯವಾದ ಅರ್ಪಿಸಿದ್ದಾರೆ.
ನಾಲ್ವರು ನೇಪಾಳಿ ಪ್ರಜೆಗಳು ಉಕ್ರೇನ್ ನಲ್ಲಿ ಸಿಲುಕಿದ್ದರು. ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರಕಾರ ಕೈಗೊಂಡಿದ್ದ ಆಪರೇಷನ್ ಗಂಗಾ ಅಡಿಯಲ್ಲಿ ನೇಪಾಳಿಗರನ್ನೂ ರಕ್ಷಣೆ ಮಾಡಲಾಗಿತ್ತು. ನಾಲ್ವರೂ ಕೂಡಾ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನಲೆಯಲ್ಲಿ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇಬಾ ಅವರು ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಈ ಹಿಂದೆ ಬಾಂಗ್ಲಾ ಪ್ರಜೆಗಳನ್ನು ರಕ್ಷಣೆ ಮಾಡಿದಕ್ಕಾಗಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಹಾಗೂ ಪಾಕ್ ಯುವತಿಯೋರ್ವಳು ಆಕೆಯನ್ನು ರಕ್ಷಣೆ ಮಾಡಿದ್ದಕ್ಕೆ ಭಾರತ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದರು.