ಬೆಂಗಳೂರು, ಮಾ 11 (DaijiworldNews/DB): ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಎಂಎಲ್ಸಿ ಸಿಎಂ ಇಬ್ರಾಹಿಂ ಅವರು, ತಮ್ಮ ಕಾಂಗ್ರೆಸ್ ಪಕ್ಷದ ಸದಸ್ಯ ಸ್ಥಾನ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ಅವರು, ಕಳೆದ 12 ವರ್ಷಗಳಿಂದ ಪಕ್ಷದಲ್ಲಿ ತೊಡಗಿಸಿಕೊಂಡಿದ್ದೇನೆ. ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಚುನಾವಣೆ ನಡೆಸಿದ್ದರೆ 13 ಸದಸ್ಯರ ಬೆಂಬಲದೊಂದಿಗೆ ಗೆಲುವು ಸಾಧಿಸುತ್ತಿದ್ದೆ. ಆದರೆ ಆ ರೀತಿ ಮಾಡದೆ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿರುವುದು ನನಗೆ ತೀವ್ರ ಬೇಸರ ಉಂಟಾಗಿದೆ. ಈ ಬಗ್ಗೆ ಕೇಳಿದ್ದ ಪ್ರಶ್ನೆಗೂ ನನಗೆ ಈವರೆಗೆ ಯಾವುದೇ ಉತ್ತರ ಸಿಕ್ಕಿಲ್ಲ. ಈ ಎಲ್ಲಾ ಬೆಳವಣಿಗೆಗಳಿಂದಾಗಿ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.