ಬೆಂಗಳೂರು, ಮಾ 13 (DaijiworldNews/HR): ಯುವಕರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅವಕಾಶ ನೀಡಬೇಕು. ಯುವಕರು ತಮ್ಮ ಮೌಲ್ಯ ಮತ್ತು ಶಕ್ತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ರಾಜ್ಯ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಯಲ್ಲಿ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ನೆಲಕಚ್ಚಿದ್ದು, ಪಕ್ಷದ ಕಾರ್ಯಕರ್ತರ ಸಂಖ್ಯೆ ಕುಗ್ಗಿದೆ ಎಂಬ ಸುದ್ದಿ ಹಬ್ಬುತ್ತಿದ್ದು ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ ಎಂಬುದನ್ನು ಮರೆಯದಿರಿ ಎಂದರು.
ಇನ್ನು ದೇವಸ್ಥಾನ, ಜಾತಿ, ಧರ್ಮದ ವಿಚಾರದಲ್ಲಿ ಸಮಾಜ ಒಡೆಯುವುದೇ ಕೇಸರಿ ಪಕ್ಷದ ಅಜೆಂಡಾ. 370 ನೇ ವಿಧಿ, ಗೋಹತ್ಯೆ ಮತ್ತು ಧಾರ್ಮಿಕ ಮತಾಂತರದಂತಹ ಕಾರ್ಯಸೂಚಿಗಳನ್ನು ಹೊರತುಪಡಿಸಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಹೊಂದಿದ್ದಾರೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.