ಮೈಸೂರು, ಮಾ 13 (DaijiworldNews/HR): ನನಗೆ ಮತ್ತು ಪುತ್ರ ಹರೀಶ್ ಗೌಡರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡುತ್ತಾರೆ ಎನ್ನುವುದು ಖಚಿತವಾದ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಮತ್ತು ಮಗ ಹರೀಶ್ ಗೌಡರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಕೇಳಿದ್ದೇನೆ. ಮಗನಿಗೆ ಟಿಕೆಟ್ ನೀಡುವ ಬಗ್ಗೆ ಮೊದಲು ತೀರ್ಮಾನವಾಗಬೇಕು. ಹುಣಸೂರು, ಕೆಆರ್ ನಗರ, ಚಾಮರಾಜ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿ ಹರೀಶ್ ಗೌಡರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು. ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು.
ಇನ್ನು ಬಿಜೆಪಿಗೆ ಬರುವಂತೆ ಕೂಡ ಪಕ್ಷದ ನಾಯಕರು ಆಹ್ವಾನಿಸಿದ್ದು, ನನಗೆ ಹಾಗೂ ಪುತ್ರನಿಗೆ ಟಿಕೆಟ್ ನೀಡುವ ಭರವಸೆ ಕೂಡ ನೀಡಿದ್ದಾರೆ. ಆದರೆ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.