ನವದೆಹಲಿ, ಮಾ 13 (DaijiworldNews/DB): ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಹೀನಾಯ ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ತಮ್ಮ ಸ್ಥಾನಗಳಿಗೆ ರವಿವಾರ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿಯಲ್ಲಿ ರವಿವಾರ ಕಾಂಗ್ರೆಸ್ ಪಕ್ಷದ ಉನ್ನತ ಕಾರ್ಯಕಾರಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೂವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಕಾರ್ಯಕಾರಿ ಸಮಿತಿಯಲ್ಲಿರುವವರೆಲ್ಲರೂ ಗಾಂಧಿ ಕುಟುಂಬದ ಆಪ್ತರಾಗಿರುವುದರಿಂದ ರಾಜೀನಾಮೆ ಅಂಗೀಕಾರ ಆಗುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.