ಬೆಂಗಳೂರು, ಮಾ 13 (DaijiworldNews/HR): ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗಿನ್ನು ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದು ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು. ಆದರೆ ಇನ್ನೂ ನನಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕೆಲ ವಾರಗಳ ಹಿಂದೆಯೇ ಸಿ.ಎಂ. ಇಬ್ರಾಹಿಂ ಹೇಳಿದ್ದು, ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅನೇಕ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.