ನವದೆಹಲಿ, ಮಾ 13 (DaijiworldNews/DB): ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ ನಾಯಕರು ಭಾನುವಾರ ಮಹತ್ವದ ಸಭೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಹೋರಾಟಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ಪ್ರತಿಪಕ್ಷಗಳ ಜತೆಗೂಡಿ ಕೇಂದ್ರದ ವಿರುದ್ಧ ಹೋರಾಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ಬಳಿಕ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲು ಮತ್ತು ಕೇಂದ್ರದ ವಿರುದ್ದ ಹೋರಾಡಲು ಕೈಗೊಳ್ಳಬೇಕಾದ ಹೊಸ ರಣತಂತ್ರಗಳ ಬಗ್ಗೆ ಚರ್ಚಿಸಲು ಸೋನಿಯಾ ಗಾಂಧಿ ನೇತೃತ್ವದಲ್ಲಿ ದೆಹಲಿಯ10 ಜನಪಥ್ನಲ್ಲಿಸಭೆ ನಡೆಯಿತು.
ಸಭೆಯ ಬಳಿಕ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಚರ್ಚಿಸಲಾಗಿದೆ. ಉಕ್ರೇನ್ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಕುರಿತು, ರೈತರ ಎಂಎಸ್ಪಿ , ಹಣದುಬ್ಬರ, ನಿರುದ್ಯೋಗ, ಸಮಸ್ಯೆಗಳನ್ನು ಪ್ರಸ್ತಾಪಿಸಲು ಯೋಜಿಸಲಾಗಿದೆ ಎಂದರು.
ಹಿರಿಯ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಆನಂದ್ ಶರ್ಮಾ, ಮನೀಶ್ ತಿವಾರಿ ಸೇರಿದಂತೆ ಪ್ರಮುಖರು ಇದ್ದರು.