ಮೈಸೂರು, ಮಾ 13 (DaijiworldNews/DB): ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದು, ಬಿಜೆಪಿಗೆ ಬರಲು ಸಿದ್ದರಾಗಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಅದೀಗ ಪಾರ್ಟ್ ಟೈಂ ಪಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಆ ಪಕ್ಷದ ಕೆಲ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಬಿಜೆಪಿಗೆ ಬರಲು ಸಿದ್ಧವಾಗಿದ್ದಾರೆ ಎಂದು ತಿಳಿಸಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರ ಹೆಸರಿಟ್ಟುಕೊಂಡು ಕಾಂಗ್ರೆಸ್ ನಲ್ಲಿ ಹಲವು ನಕಲಿ ಗಾಂಧಿಗಳು ರಾಜಕಾರಣ ಮಾಡುತ್ತಿದ್ದಾರೆ ಎಂದವರು ಇದೇ ವೇಳೆ ಟೀಕಿಸಿದರು.