ನವದೆಹಲಿ, ಮಾ 13 (DaijiworldNews/HR): ಯುದ್ಧಗ್ರಸ್ಥ ಉಕ್ರೇನ್ನ ಖಾರ್ಕಿವ್ನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಹಾವೇರಿ ಜಿಲ್ಲೆಯ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವರ ಪಾರ್ಥಿವ ಶರೀರವನ್ನು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕು ಎಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ.
ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಪ್ರಚಲಿತ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆಯನ್ನು ಇಂದು ನಡೆಸಿದ್ದಾರೆ.
ಇನ್ನು ಭದ್ರತಾ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ, ಶೆಲ್ ದಾಳಿಯಿಂದ ಮೃತಪಟ್ಟ ಹಾವೇರಿ ಜಿಲ್ಲೆಯ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವರ ಪಾರ್ಥಿವ ಶರೀರವನ್ನು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕು ಎಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ.