ಚಂಡೀಗಢ, ಮಾ 13 (DaijiworldNews/DB): ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಗಳಿಸಿದ್ದ ಭಗವಂತ್ ಮಾನ್ ಅವರು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಊರಾದ ಖತ್ಕರ್ ಕಾಲನ್ನಲ್ಲಿ ಮಾ.16ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಶನಿವಾರ ಭೇಟಿಯಾದ ಭಗವಂತ್ ಮನ್, ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಎಎಪಿಯ ಶಾಸಕರ ಬೆಂಬಲ ಪತ್ರವನ್ನು ರಾಜ್ಯ ಪಾಲರಿಗೆ ಹಸ್ತಾಂತರಿಸಲಾಗಿದ್ದು, ಸರಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.