ಗದಗ, ಮಾ 14 (DaijiworldNews/HR): 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಜನಪ್ರತಿನಿಧಿಗಳು ಮತದಾರರನ್ನು ಸೆಳೆಯಲು ಆರಂಭಿಸಿದ್ದು, ಇದೀಗ ಸಾರಿಗೆ ಸಚಿವ ಶ್ರೀರಾಮುಲು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡೋದಾಗಿ ಹೇಳಿದ್ದಾರೆ.
ಇನ್ನು ಮುಂದಿನ ತಿಂಗಳಿಂದ ಸಿಬ್ಬಂದಿಗೆ ನಿಯಮಿತವಾಗಿ ಸಂಬಳ ನೀಡಲಾಗುವುದು. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ 3 ಸಾವಿರ ಕೋಟಿ ಇಲಾಖೆಗೆ ನೀಡಿದ್ದಾರೆ. ಇನ್ನು ಮುಂದೆ ಚಾಲಕರ ನಿರ್ವಾಹಕರು ಹಾಗೂ ಸಿಬ್ಬಂದಿ ಸಂಬಳಕ್ಕೆ ಕಾಯಬೇಕಿಲ್ಲ. ಅಡಮಾನ ಇಟ್ಟಿದ್ದು ವೈಯಕ್ತಿಕ ಬಳಕೆಗೆ ಅಲ್ಲ. ಸಿಬ್ಬಂದಿ ಭವಿಷ್ಯದ ನಿಧಿಗಾಗಿ ಎಂದು ಸ್ಪಷ್ಟಪಡಿಸಿದ್ದಾರೆ.
ಬಳಿಕ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಾರ್ಟ್ಟೈಂ ಪಕ್ಷವಾಗಿ ಉಳಿಯುತ್ತದೆ. ರಾಹುಲ್ ಗಾಂಧಿ ಪಾರ್ಟ್ಟೈಂ ನಾಯಕರಾಗುತ್ತಾರೆ. ಕಾಂಗ್ರೆಸ್ ವೈಟ್ವಾಶ್ ಮಾಡುವ ಕೆಲಸ ಮಾಡುತ್ತಿದೆ ಎಂದಿದ್ದಾರೆ.