ನವದೆಹಲಿ, ಮಾ 14 (DaijiworldNews/MS): ಕೋವಿಡ್ ಸೋಂಕಿಗೆ ತುತ್ತಾಗಿರುವ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ.
ಭಾನುವಾರ ರಾತ್ರಿ ಟ್ವೀಟ್ ಮಾಡಿದ್ದ ಒರಾಕ್ ಒಬಾಮಾ, "ನನಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದೆರಡು ದಿನಗಳಿಂದ ಗಂಟಲು ಕೆರೆತವಿದೆ. ಸದ್ಯ ದನ್ನು ಹೊರತುಪಡಿಸಿ ನಾನು ಆರಾಮವಾಗಿದ್ದೇನೆ . ನಾನು ಮತ್ತು ಮಿಶೆಲ್ ಲಸಿಕೆಯ ಬೂಸ್ಟರ್ ಡೋಸ್ ಅನ್ನೂ ಪಡೆದುಕೊಂಡಿದ್ದೇವೆ. ಇದಕ್ಕಾಗಿ ಧನ್ಯವಾದಗಳು. ಇನ್ನು, ಮಿಶೆಲ್ಗೆ ಕೋವಿಡ್ ನೆಗೆಟಿವ್ ಬಂದಿದೆ" ಎಂದು ಹೇಳಿದ್ದರು.
ಈ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಮೋದಿ, 'ಬರಾಕ್ ಒಬಾಮಾ ಅವರು ಕೋವಿಡ್-19 ನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ. ನಿಮ್ಮ ಕುಟುಂಬದ ಉತ್ತಮ ಆರೋಗ್ಯ ಮತ್ತು ಕ್ಷೇಮಕ್ಕಾಗಿ ನಾನು ಹಾರೈಸುತ್ತೇನೆ' ಎಂದು ಅವರು ಬರೆದುಕೊಂಡಿದ್ದಾರೆ.