ಬೆಂಗಳೂರು, ಮಾ 14 (DaijiworldNews/HR): ಪಕ್ಷಕ್ಕೆ ಹೊರೆಯಾದವರ ಬಗ್ಗೆ ಸಿಎಂ ಬೊಮ್ಮಾಯಿ ಗಮನ ಹರಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ರಾಜ್ಯದ ಅಸಮರ್ಥ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷಕ್ಕೆ ಹೊರೆಯಾದವರ ಬಗ್ಗೆ ಸಿಎಂ ಗಮನ ಹರಿಸಬೇಕು. ಪಕ್ಷಕ್ಕೆ ಕೊಡುಗೆ ನೀಡದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದಿರುವ ಸಿ.ಟಿ. ರವಿ ಈ ಮೂಲಕ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸದ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಬಿ ಎಸ್ ವೈ ಪುತ್ರ ವಿಜಯೇಂದ್ರಗೆ ಸ್ಥಾನಮಾನ ವಿಚಾರವಾಗಿ ಮಾತನಾಡಿದ ಅವರು, ಉಪಾಧ್ಯಕ್ಷ ಹುದ್ದೆ ಸಣ್ಣ ಹುದ್ದೆಯಲ್ಲ, ಅದನ್ನು ಸಣ್ಣ ಹುದ್ದೆ ಎಂದು ಪರಿಗಣಿಸಿದರೆ ನಾನು ಏನು ಹೇಳಬೇಕು ಗೊತ್ತಾಗುತ್ತಿಲ್ಲ. ಹಲವರು ಪರಿಸ್ಥಿತಿ ಲಾಭ ಪಡೆದುಕೊಂಡು ಮಜಾ ಮಾಡುತ್ತಿದ್ದಾರೆ. ಪಕ್ಷಕ್ಕೆ ಕೊಡುಗೆ ನೀಡದವರನ್ನು ಕೈಬಿಡಬೇಕು ಎಂದು ಹೇಳಿದ್ದಾರೆ.