ನವದೆಹಲಿ, ಮಾ 14 (DaijiworldNews/HR): ಎನ್ಎಸ್ಇಯ ಬಹುಕೋಟಿ ಮಾರುಕಟ್ಟೆ ವಂಚನೆ ಮತ್ತು ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ(ಎನ್ಎಸ್ಇ) ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯವು14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಇನ್ನು ಪ್ರತಿದಿನ ಸಂಜೆ ಚಿತ್ರಾ ರಾಮಕೃಷ್ಣ ಅವರ ವಕೀಲರನ್ನು ಭೇಟಿಯಾಗಲು ಅವಕಾಶ ನೀಡಿದ ನ್ಯಾಯಾಲಯ, ಚಿತ್ರಾ ರಾಮಕೃಷ್ಣ ಅವರನ್ನು ಪ್ರತಿ 24 ಗಂಟೆಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಕೋರ್ಟ್ ಸೂಚಿಸಿದೆ.
ಚಿತ್ರಾ ರಾಮಕೃಷ್ಣ ಅವರು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವನ್ನು 2016ರಲ್ಲಿ ತೊರೆದಿದ್ದರು.