ನವದೆಹಲಿ, ಮಾ 07 (DaijiworldNews/HR): ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸೋನಿಯಾ ಗಾಂಧಿ ಕಾರಣ ಎಂದು ದೂರಿ ಪ್ರಯೋಜನವಿಲ್ಲ, ಪಕ್ಷದ ಪ್ರತಿಯೊಬ್ಬರೂ ಸೋಲಿನ ಹೊಣೆ ಹೊರಬೇಕಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಖರ್ಗೆ, ಕೇವಲ ಗಾಂಧಿ ಕುಟುಂಬ ಮಾತ್ರ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲು ಕಾರಣ ಎಂದು ಆರೋಪಿಸುವುದು ಸರಿಯಲ್ಲ. ನಾವೆಲ್ಲರೂ ಚುನಾವಣೆ ಫಲಿತಾಂಶದ ಸೋಲಿನ ಜವಾಬ್ದಾರಿ ಹೊತ್ತಿದ್ದೇವೆ ಎಂದರು.
ಇನ್ನು ಇಡೀ ಪಕ್ಷದ ಜವಾಬ್ದಾರಿ ಹೊತ್ತಿರುವ ಸೋನಿಯಾ ಗಾಂಧಿಯವರು ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಮುಂದಿನ ಚುನಾವಣೆಯನ್ನು ಎದುರಿಸಲು ನಡೆಸಬೇಕಿರುವ ಸಿದ್ಧತೆ ಬಗ್ಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.