ಬೆಂಗಳೂರು, ಮಾ 15 (DaijiworldNews/DB): ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ. ವಿದ್ಯಾರ್ಥಿಗಳು, ಪೋಷಕರು ಸೇರಿ ಎಲ್ಲರೂ ಹೈಕೋರ್ಟ್ ತೀರ್ಪನ್ನು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಶಿಕ್ಷಣ ಮುಖ್ಯ ಎಂಬುದನ್ನು ಮನಗಂಡು ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಬೇಕು. ಪರೀಕ್ಷೆಗಳಿಗೆ ಕುಳಿತುಕೊಳ್ಳಬೇಕು. ಭವಿಷ್ಯ ರೂಪಿಸುವುದರತ್ತ ಗಮನ ಹರಿಸಿ ಎಂದವರು ಹೇಳಿದರು.
ತೀರ್ಪಿಗೆ ಎಲ್ಲರೂ ತಲೆಬಾಗಬೇಕು. ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಗೃಹ ಇಲಾಖೆ ಸಿದ್ಧವಿದೆ ಎಂದವರು ಇದೇ ವೇಳೆ ಸೂಚನೆ ನೀಡಿದರು.