ಸಾಗರ, ಮಾ 15 (DaijiworldNews/DB): ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷರೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ಶಿರೂರು ಆಲಳ್ಳಿ ನಿವಾಸಿ, ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ಸಾವನ್ನಪ್ಪಿದವರು. ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿಅಣ್ಣಪ್ಪ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಅನುಮಾನಗಳು ಹುಟ್ಟಿಕೊಂಡಿದೆ.
ಸಾಗರ ಉಪ ವಿಭಾಗದ ಎಎಸ್ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ ಪೊಲೀಸ್ ಶ್ವಾನ ದಳ, ಬೆರಳಚ್ಚುಗಾರರ ತಂಡ ಸ್ಥಳಕ್ಕೆ ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.