ಬೆಂಗಳೂರು, ಮಾ 17 (DaijiworldNews/HR): ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಲಾಗಿದ್ದು,ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ದಿವಗಂತ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಹುಟ್ಟು ಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ಅವರು, ಅಪ್ಪು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಅವರೆಂದೂ ಅಭಿಮಾನಿಗಳು, ಆರಾಧಕರ ಹೃದಯದಲ್ಲಿ ಜೀವಂತವಾಗಿದ್ದಾರೆ. ನಮ್ಮೆಲ್ಲರಿಗೂ ಅವರು ಪ್ರೇರಣೆಯಾಗಿದ್ದಾರೆ ಎಂದರು.
ಇನ್ನು ಅಂಗಾಂಗ ದಾನ ಮಾಡುವ ಮೂಲಕ ಪುನೀತ್ ರಾಜ್ ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಈಗಾಗಲೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಶೀಘ್ರವೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.