ಬೆಂಗಳೂರು, ಮಾ 17 (DaijiworldNews/DB): ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯು ಹುಬ್ಬೇರಿಸುವಂತೆ ಮಾಡುತ್ತಿದೆ ಎಂದು ಬಿಜೆಪಿ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ.
ಟ್ವೀಟರ್ ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ರಷ್ಯಾ-ಉಕ್ರೇನ್ ಯುದ್ಧದ ವಿಚಾರವಾಗಿ ಮೋದಿ ಸರಕಾರದ ನಿಲುವು ಸರಿಯಿಲ್ಲ. ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಕೈಗೊಳ್ಳಲಾದ ನಿರ್ಧಾರದಿಂದ ಕೇಂದ್ರ ಸರ್ಕಾರ ದೂರ ಉಳಿದಿದ್ದಲ್ಲದೆ, ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಛಾತೈಲ ಖರೀದಿಸಲು ಸರಕಾರ ಮುಂದಾಗಿರುವುದು ದುರದೃಷ್ಟಕರ ಎಂದಿದ್ದಾರೆ.
ನಮ್ಮ ದೇಶದ ಮೇಲೆ ದ್ವೇಷ ಸಾಧಿಸುತ್ತಿರುವುದಲ್ಲದೆ ನಮ್ಮ ನೆಲವನ್ನು ಅಕ್ರಮವಾಗಿ ಕಬಳಿಕೆ ಮಾಡುತ್ತಿದೆ. ಹೀಗಿದ್ದೂ ಚೀನಾದ ವಿದೇಶಾಂಗ ಸಚಿವರು ಶೀಘ್ರ ಭಾರತಕ್ಕೆ ಬರುತ್ತಿದ್ದಾರೆ ಎಂದೂ ಟ್ವೀಟಿಸಿದ್ದಾರೆ.