ಬೆಂಗಳೂರು, ಮಾ 17 (DaijiworldNews/DB): ಪುನೀತ್ ರಾಜ್ ಕುಮಾರ್ ಅಭಿನಯಿಸಿರುವ ’ಜೇಮ್ಸ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಪುನೀತ್ ಅಭಿಮಾನಿಗಳು ನನಗೆ ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಜೊತೆ ಚರ್ಚಿಸುತ್ತೇನೆ ಎಂದರು.
ಪುನೀತ್ ಹುಟ್ಟುಹಬ್ಬಕ್ಕೆ ಮನದಾಳದಿಂದ ಶುಭಾಶಯ ಸಲ್ಲಿಸುತ್ತೇನೆ. ಪ್ರಸ್ತುತ ಅವರು ನಮ್ಮ ನಡುವೆ ಇಲ್ಲ. ಪುನೀತ್ ಅವರಿಗೆ ಸರಕಾರ ಘೋಷಣೆ ಮಾಡಿರುವ ಕರ್ನಾಟಕ ರತ್ನಪ್ರಶಸ್ತಿಯನ್ನು ಶೀಘ್ರ ನೀಡುತ್ತೇವೆ ಎಂದರು.