ಬೆಂಗಳೂರು, ಮಾ 17 (DaijiworldNews/MS): ಹಿಜಾಬ್ ತೀರ್ಪು ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮುಸ್ಲಿಂ ಸಂಘಟನೆಗಳು ಇಂದು ಬಂದ್ ನಡೆಸುತ್ತಿದ್ದು, "ಈ ಪ್ರತಿಭಟನೆ, ಬಂದ್ ಹಿಂದೆ ಕಾಂಗ್ರೆಸ್ ಕೈವಾಡವಿರುವುದು ಸಿದ್ದರಾಮಯ್ಯ ಮಾತುಗಳಲ್ಲಿ ಸ್ಪಷ್ಟವಾಗಿದೆ" ಎಂದು ಬಿಜೆಪಿ ಆರೋಪಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, " ನ್ಯಾಯಾಲಯವು ಶಾಲೆಗಳಲ್ಲಿ ಹಿಜಾಬ್ ಧರಿಸಬಾರದೆಂದು ಆದೇಶ ನೀಡಿದೆ. ಇದನ್ನು ವಿರೋಧಿಸಿ ಕೆಲವು ಕಡೆ ಬಂದ್ ಮಾಡಲಾಗಿದೆ. ಬಂದ್ ಮಾಡುವುದು ಅವರ ಹಕ್ಕು ಎಂದು ಸದನದೊಳಗೆ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ ಪ್ರತಿಭಟನೆ, ಬಂದ್ ಹಿಂದೆ ಕಾಂಗ್ರೆಸ್ ಕೈವಾಡವಿರುವುದು ಸಿದ್ದರಾಮಯ್ಯ ಮಾತುಗಳಲ್ಲಿ ಸ್ಪಷ್ಟವಾಗಿದೆ" ಎಂದು ಆರೋಪಿಸಿದೆ.
"ಹೈಕೋರ್ಟ್ ಆದೇಶದಲ್ಲಿ ಅಸಮಾಧಾನವಿದ್ದರೆ, ಸುಪ್ರೀಂ ಕೋರ್ಟ್ಗೆ ಹೋಗಬಹುದು. ಅದನ್ನು ಬಿಟ್ಟು ಬಂದ್ ಮಾಡುವುದು, ಬಂದ್ ಮಾಡುವುದನ್ನು ಬೆಂಬಲಿಸುವುದು ನ್ಯಾಯಾಂಗ ನಿಂದನೆ ಅಲ್ಲವೇ? ಬಂದ್ಗೆ ಬೆಂಬಲ ಸೂಚಿಸಿರುವ ಸಿದ್ದರಾಮಯ್ಯ ಅವರಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲವೇ" ಎಂದು ಬಿಜೆಪಿ ಪ್ರಶ್ನಿಸಿದೆ.