ಗದಗ, ಮಾ 18 (DaijiworldNews/HR): ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಕಿರುಕುಳಕ್ಕೆ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್ಐಆರ್ ದಾಖಲಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ದುಷ್ಕರ್ಮಿಗಳ ಕಿರುಕುಳ ಹೆಚ್ಚಾಗಿದ್ದು, ಮಾನಸಿಕ ಹಿಂಸೆ ತಾಳದೇ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಅರ್ಜುನ್ ಪಾಟೀಲ್ ಅವರ ಪತ್ನಿ ಹಾಗೂ ತಂದೆ ತಾಯಿ ಸೇರಿದಂತೆ ಕುಟುಂಬಸ್ಥರು ಧಾರವಾಡಕ್ಕೆ ಹೋಗಿದ್ದು, ಈ ವೇಳೆ, ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ಮನೆಯಲ್ಲೇ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗದಗ ಗ್ರಾಮೀಣ ಠಾಣೆಯಲ್ಲಿ ಕಿರುಕುಳ ನೀಡಿದ್ದ ಆರೋಪದ ಮೇಲೆ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿ 9 ಜನರ ಮೇಲೆ ಪ್ರಕರಣ ದಾಖಲಾಗಿದೆ.