ಬೆಂಗಳೂರು, ಮಾ 18 (DaijiworldNews/HR): ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರೇ ತಮ್ಮ ಹೈಕಮಾಂಡ್ ಮನವೊಲಿಕೆಗಾಗಿ ಮಕ್ಕಳ ಭವಿಷ್ಯ, ಶೈಕ್ಷಣಿಕ ವ್ಯವಸ್ಥೆಯನ್ನೇ ಹಾಳುಮಾಡಬೇಡಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿ ಕೂಡ ರಾಜಕೀಯ ಮಾಡುವುದು ಸರಿಯಲ್ಲ. ನಾವೆಲ್ಲರೂ ಒಂದು ವ್ಯವಸ್ಥೆಯ ಅಡಿಯಲ್ಲಿ ಶಿಕ್ಷಣವನ್ನು ಪಡೆದಿದ್ದೇವೆ. ಪಠ್ಯಕ್ರಮದಲ್ಲಿ ಪಕ್ಷಕ್ಕೆ ಬೇಕಾದಂತೆ ಬದಲಾವಣೆ ತರುವುದು ಸರಿಯಲ್ಲ ಎಂದರು.
ಇನ್ನು ಈಗಾಗಲೇ ಕೊರೊನಾದಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ಕೊಡುವ ಬಗ್ಗೆ ಗಮನ ಹರಿಸಿ. ಅದನ್ನು ಬಿಟ್ಟು ಈ ರೀತಿ ಪಠ್ಯಕ್ರಮ ಬದಲಿಸಲು ಹೊರಡುವುದು ಸರಿಯಲ್ಲ ಎಂದು ಸಲಹೆ ನೀಡಿದ್ದಾರೆ.