ಬೆಂಗಳೂರು, ಮಾ. 18(DaijiworldNews/SM): "ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ" ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಯುದ್ಧದ ಸಂದರ್ಭದಲ್ಲಿ ಹಾವೇರಿ ಮೂಲದ ನವೀನ್ ಮೃತಪಟ್ಟಿದ್ದರು. ಅವರ ಮೃತದೇಹವನ್ನು ತಾಯ್ನಾಡಿಗೆ ತರುವಂತೆ ಕುಟುಂಬಸ್ಥರು ಒತ್ತಾಯಿಸುತ್ತಿದ್ದರು. ಕೇಂದ್ರ ಸರಕಾರವೂ ಕೂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿತ್ತು. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಿಗಳ ಸಭೆ ನಡೆಸಿ ಪಾರ್ಥೀವ ಶರೀರವನ್ನು ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ನಿರಂತರ ಶ್ರಮದ ಪರಿಣಾಮವಾಗಿ ಇದೀಗ ಪಾರ್ಥೀವ ಶರೀರ ತಾಯ್ನಾಡಿಗೆ ರವಾನೆಯಾಗುತ್ತಿದೆ.
ಇನ್ನು ಉಕ್ರೇನ್ ನಲ್ಲಿ ಸಿಲುಕಿದ್ದ ಭಾರತೀಯರೆಲ್ಲರನ್ನು ಸುರಕ್ಷಿತವಾಗಿ ಈಗಾಗಲೇ ಕರೆತರುವಲ್ಲಿ ಸರಕಾರ ಶಕ್ತವಾಗಿದೆ.