ಬೆಂಗಳೂರು, ಮಾ. 18(DaijiworldNews/SM): ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸುವವರಿಗೆ ಸಚಿವ ಮುರುಗೇಶ್ ನಿರಾಣಿ ಗುಡ್ ನ್ಯೂಸ್ ನೀಡಿದ್ದಾರೆ. ಕೈಗಾರಿಕೆ ಸ್ಥಾಪನೆ ಮುಂದೆ ಬಂದಲ್ಲಿ ಜಮೀನು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದೆಂದು ಸಚಿವರು ಭರವಸೆ ನೀಡಿದ್ದಾರೆ.
ಸದನದಲ್ಲಿ ಶಾಸಕ ಯಶವಂತರಾಯವಿಠಲಗೌಡ ಪಾಟೀಲ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿಪಡಿಸಲು ಸರ್ಕಾರ ಬದ್ದ. ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬಂದರೆ ಎಲ್ಲ ರೀತಿಯ ಸೌಕರ್ಯವನ್ನು ಕಲ್ಪಿಸಿಕೊಡಲು ಸಿದ್ದ ಎಂದು ಸಚಿವರು ಸದನದಲ್ಲಿ ತಿಳಿಸಿದರು.
ಪ್ರತಿ ಜಿಲ್ಲೆಯಲ್ಲೂ ಒಂದು ಸಾವಿರ ಎಕರೆ ಹಾಗೂ ತಾಲ್ಲೂಕು ಮಟ್ಟದಲ್ಲಿ 100 ಎಕರೆ ಜಮೀನುಗಳನ್ನು ಕೈಗಾರಿಕೆಗಳಿಗಾಗಿಯೇ ಮೀಸಲಿಡಲು ತೀರ್ಮಾನಿಸಿದ್ದೇವೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.