ಗೋಕರ್ಣ, ಮಾ 19 (DaijiworldNews/HR): ಕರ್ನಾಟಕದ 20 ಸಾವಿರ ಶಾಲೆಗಳಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಪೋಷಕರಲ್ಲಿ ಗೊಂದಲವಿದ್ದು,ಅದನ್ನು ನಿವಾರಿಸುವ ಕೆಲಸ ಮಾಡುತ್ತೇವೆ. ರಾಜ್ಯದ 20 ಸಾವಿರ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದರು.
ಇನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಹೀಗಾಗಿ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿಗೆ ತರಲು ಚಿಂತನೆ ನಡೆಸಲಾಗುವುದು ಎಂದಿದ್ದಾರೆ.
ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ತಜ್ಞರ ಜೊತೆಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.