ಮೈಸೂರು, ಮಾ 19 (DaijiworldNews/HR): ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ನಿರ್ಧಾರವು ಕೊರೊನಾ ವೈರಸ್ಗಿಂತಲೂ ಮಾರಕ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಯಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ. ಚುನಾವಣೆ ವೇಳೆ ರಾಜಕಾರಣ ಮಾಡುವುದು ಸರಿ. ಆದರೆ ಅಧಿಕಾರಕ್ಕೆ ಬಂದ ಮೇಲೆ ಜಾತ್ಯಾತೀತವಾಗಿ ನಡೆದುಕೊಳ್ಳುಬೇಕು ಎಂದರು.
ಇನ್ನು ಸರ್ಕಾರವೂ ಶಿಕ್ಷಣವನ್ನು ಬಿಟ್ಟು ಅನ್ಯ ವಿಚಾರಗಳ ಬಗ್ಗೆ ಗಮನಹರಿಸಬಾರದು. ಈಗಾಗಲೇ ಕೊರೊನಾದಿಂದ ಎರಡು ವರ್ಷ ಮಕ್ಕಳಿಗೆ ಶಿಕ್ಷಣ ಸಿಕ್ಕಿಲ್ಲ. ಶಾಲೆಯಲ್ಲಿ ಸಮಾನತೆ ಕಾಪಾಡಿಕೊಳ್ಳಬೇಕು. ನ್ಯಾಯಾಲಯದ ತೀರ್ಪು ಸಹ ಸ್ಪಷ್ಟವಾಗಿ ಇದನ್ನೇ ಹೇಳಿದೆ ಎಂದು ಹೇಳಿದ್ದಾರೆ.