ಯಾದಗಿರಿ, ಮಾ 19 (DaijiworldNews/HR): ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು ಎಂಬುದು ನಮ್ಮ ಉದ್ದೇಶ ಈ ನಿಟ್ಟಿನಲ್ಲಿ ಪಠ್ಯದಲ್ಲಿ ಭಗವದ್ಗೀತೆ ಸೇರಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ನಮ್ಮ ಧ್ಯೇಯ. ನೈತಿಕ ಶಿಕ್ಷಣ ಕೊಡಬೇಕು ಎಂಬ ನಿಟ್ಟಿನಲ್ಲಿ ಭಗವದ್ಗೀತೆ ಅಳವಡಿಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದರು.
ಇನ್ನು ಗುಜರಾತ್ ನಲ್ಲಿ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸಲಾಗಿದ್ದು, ಈ ಕುರಿತು ನಮ್ಮ ಸಚಿವರು ಚರ್ಚೆ ನಡೆಸಿದ್ದಾರೆ. ಶಿಕ್ಷಣ ಇಲಾಖೆಯಿಂದ ವಿವರ ಪಡೆದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.