ಇಂಫಾಲ, ಮಾ 20 (DaijiworldNews/HR): ಮಣಿಪುರದ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಅವರು ಮುಂದುವರಿಯಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ನಿರ್ಮಾಲಾ ಸೀತಾರಾಮನ್ ಅವರು ಇಂಫಾಲದಲ್ಲಿ ನಡೆದ ಸಭೆಯಲ್ಲಿ ಬಿರೇನ್ ಸಿಂಗ್ ಅವರನ್ನು ಸನ್ಮಾನಿಸಿ ಮಣಿಪುರದಲ್ಲಿ ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇದು ಎಲ್ಲರೂ ಒಮ್ಮತದಿಂದ ತೆಗೆದುಕೊಂಡ ಉತ್ತಮ ನಿರ್ಧಾರವಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಮಣಿಪುರದ 60 ಕ್ಷೇತ್ರಗಳ ಪೈಕಿ ಬಿಜೆಪಿಯು 32 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 18 ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದರು.