ಬೆಂಗಳೂರು, ಮಾ 21 (DaijiworldNews/HR): ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ರಾಜ್ಯದಲ್ಲೇ ಶಿಕ್ಷಣ ಮುಂದುವರೆಸಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗ್ತಿದ್ದು, ವಿದ್ಯಾರ್ಥಿಗಳು ರಾಜ್ಯದಲ್ಲೇ ಯಾವುದೇ ಶುಲ್ಕ ಪಾವತಿಸದೆ ಶಿಕ್ಷಣ ಮುಂದುವರಿಸಬಹುದು ಎಂದರು.
ಇನ್ನು ರಾಜ್ಯದಲ್ಲಿರುವ 60 ಮೆಡಿಕಲ್ ಕಾಲೇಜುಗಳಲ್ಲಿ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗ್ತಿದ್ದು, ಅವರ ಕಲಿಕೆ ನಿಂತು ಹೋಗದೇ ಮುಂದುವರಿಯಬೇಕು ಎಂದು ಹೇಳಿದ್ದಾರೆ.