ಬೆಂಗಳೂರು, ಮಾ. 21 (DaijiworldNews/SM): ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಆಡಿಕೆ ಬೆಳೆ ಲಕ್ಷಾಂತರ ರೈತರ ಬದುಕನ್ನು ಬೆಳಗಿಸಿದೆ. ಅಡಿಕೆಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ. ಬದಲಾಗಿ ಅನೇಕ ಬಗೆಯಲ್ಲಿ ಅಡಿಕೆಯಿಂದ ಲಾಭವಿದೆ ಎಂದು ಹಲವು ಸಂಶೋಧನೆಗಳಿಂದ ದೃಢಪಟ್ಟಿದ್ದು, ಮತ್ತಷ್ಟು ಸಂಶೋಧನೆಗಳು ಮುಂದುವರೆದಿವೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಲೋಕಸಭಾ ಸದಸ್ಯರೊಬ್ಬರು ಅಡಿಕೆ ಹಾನಿಕಾರ ಅದನ್ನು ಬ್ಯಾನ್ ಮಾಡಬೇಕೆಂದು ತಿಳಿಸಿದ್ದರು. ಇದು ಅಲ್ಪ ಪ್ರಮಾಣದಲ್ಲಿ ರೈತರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿತ್ತು. ಆದರೆ, ಇದೀಗ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.