ಬೆಂಗಳೂರು, ಮಾ 22 (DaijiworldNews/HR): ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬೆಂಗಳೂರಿನ 9 ಕಡೆಗಳಲ್ಲಿ ಅನೇಕ ಅಧಿಕಾರಿಗಳ ಮನೆಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇನ್ನಿತರ ಜಾಗಗಳ ಮೇಲೆ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆಯನ್ನು ನಡೆಯುತ್ತಿದೆ.
ಮಧ್ಯವರ್ತಿಗಳು, ಏಜೆಂಟರು, ಭ್ರಷ್ಟ,ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ, ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ ಇಂದು 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ.
ಇನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಮದ್ಯವರ್ತಿಗಳ ನಿವಾಸದ ಮೇಲೆ ಕೂಡ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.