ಬೆಂಗಳೂರು, ಮಾ 22 (DaijiworldNews/HR): ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಸಚಿವ ವಿ. ಸೋಮಣ್ಣ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದ್ದು, ನ್ಯಾ. ಬಿ.ಜಯಂತ್ ಕುಮಾರ್ ಈ ಆದೇಶ ನೀಡಿದ್ದಾರೆ.
ಸೋಮಣ್ಣ ಅವರು ಏಪ್ರಿಲ್ 16ಕ್ಕೆ ಖುದ್ದು ಹಾಜರಾಗುವಂತೆ ಕೋರ್ಟ್ ಆದೇಶ ನೀಡಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ.
ಇನ್ನು ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿಯ ಸೂಕ್ತ ವಿವರಣೆಯನ್ನು ಪೊಲೀಸರು ನೀಡಿಲ್ಲ. ಹೀಗಾಗಿ ಅಸಮರ್ಪಕ ತನಿಖೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.