ಬೆಂಗಳೂರು, ಮಾ 22 (DaijiworldNews/HR): ರಾಜ್ಯದಲ್ಲಿ ಪದೇ ಪದೆ ಎಸಿಬಿ ದಾಳಿ ನಡೆಯುತ್ತಿದ್ದು, ಕೋಟಿ ಕೋಟಿ ಹಣ, ಚಿನ್ನಾಭರಣ, ಆಸ್ತಿ ವಶಕ್ಕೆ ಪಡೆಯಲಾಗುತ್ತಿದೆ. ಆದರೆ ಎಷ್ಟು ಜನಕ್ಕೆ ಶಿಕ್ಷೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಎಸಿಬಿಯಿಂದ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಎಷ್ಟು ಪ್ರಕರಣದಲ್ಲಿ ಶಿಕ್ಷೆಯಾಗಿದೆ? ಎಷ್ಟು ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಆಗಿದೆ? ಕೇವಲ ಎಸಿಬಿ ದಾಳಿ ನಡೆಸಿದರೆ ಉಪಯೋಗ ಇಲ್ಲ. ಇದು ಕೇವಲ ಕಣ್ಣೊರೆಸುವ ತಂತ್ರವಾಗಿ ಎಸಿಬಿ ದಾಳಿ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಇನ್ನು ಎಸಿಬಿ ದಾಳಿ ತೋರ್ಪಡಿಕೆಗೆ ನಡೆಯುತ್ತಿದ್ದು, ಇದರಿಂದ ಯಾವುದೇ ಪರಿಣಾಮ ಆಗುತ್ತಿಲ್ಲ. ಭ್ರಷ್ಟರಿಗೆ ಶಿಕ್ಷೆ ಆದರೆ ಜನರಿಗೆ ಇಂಥ ದಾಳಿಗಳ ಮೇಲೆ ನಂಬಿಕೆ ಬರುತ್ತದೆ ಎಂದು ಹೇಳಿದ್ದಾರೆ.