ಶ್ರೀನಗರ, ಮಾ 22 (DaijiworldNews/DB): ಮಧ್ಯ ಕಾಶ್ಮೀರದ ಝೂನಿಮರ್ ಪ್ರದೇಶದಲ್ಲಿ ಉಗ್ರನೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಮಂಗಳವಾರ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಹುತಾತ್ಮರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಅಪರಿಚಿತ ಉಗ್ರ ಗುಂಡಿನ ದಾಳಿ ನಡೆಸಿದ್ದ. ಈ ವೇಳೆ ಕರ್ತವ್ಯನಿರತರಾಗಿದ್ದ ಪೊಲೀಸ್ ಕಾನ್ಸ್ಟೆಬಲ್ ಅಮಿರ್ ಹುಸೇನ್ (30) ಅವರ ಕತ್ತು ಹಾಗೂ ಎದೆಯ ಭಾಗಕ್ಕೆ ಗುಂಡೇಟು ಬಿದ್ದು ತೀವ್ರ ಗಾಯಗೊಂಡಿದ್ದರು. ತತ್ ಕ್ಷಣ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಸಹದ್ಯೋಗಿ ಅಮಿರ್ ಕೊನೆಗೂ ಬದುಕಿ ಬರಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಳಿಸಿರುವುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.