ಬೆಂಗಳೂರು, ಮಾ.22(DaijiworldNews/SM): ಧಾರ್ಮಿಕ ಸಮಾರಂಭಗಳು, ಜಾತ್ರೆಗಳ ಸಂದರ್ಭದಲ್ಲಿ ಒಂದು ಸಮುದಾಯದ ಅಂಗಡಿಗಳಿಗೆ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಹಿಂದೂ ಧಾರ್ಮಿಕ ಸಮಾರಂಭಗಳಲ್ಲಿ ಮುಸ್ಲಿಂ ವರ್ತಕರ ಅಂಗಡಿ-ಮುಂಗಟ್ಟುಗಳಿಗೆ ಅವಕಾಶ ನೀಡದಿರಲು ಕೆಲವು ಹಿಂದೂ ಸಂಘಟನೆಗಳು ಒತ್ತಡ ಹೇರುತ್ತಿರುವುದು ಕಳವಳಕಾರಿ ಬೆಳವಣಿಗೆ. ಇಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗಿರುವ ಜಿಲ್ಲಾಡಳಿತ ಮೌನವಾಗಿದ್ದು ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ’ ಎಂದು ಟ್ವೀಟ್ ಮಾಡಿದ್ದಾರೆ.