ಹೈದರಾಬಾದ್, ಮಾ 23 (DaijiworldNews/HR): ಮೋದಿ ಅವರು ನಿದ್ರಾ ರೋಗದಿಂದ ಬಳಲುತ್ತಿದ್ದಾರೆ. ಮೊದಲು ಅವರಿಗೆ ಚಿಕಿತ್ಸೆ ಕೊಡಿಸಿ ಎಂದು ನಟ ಹಾಗೂ ರಾಜಕಾರಣಿ ಪ್ರಕಾಶ್ ರಾಜ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ಮೋದಿ ಕುರಿತು ಮಹಾರಾಷ್ಟ್ರದ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ಮಾತನಾಡಿ, ಮೋದಿ ಅವರು ದಿನದ 22 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಅವರು ಕೇವಲ 2 ಗಂಟೆ ಮಾತ್ರ ನಿದ್ರೆ ಮಾಡುತ್ತಾರೆ ಎಂದು ಪ್ರಧಾನಿಯನ್ನ ಹೊಗಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್, ಮೋದಿ ಅವರು ನಿದ್ರಾ ರೋಗದಿಂದ ಬಳಲುತ್ತಿದ್ದಾರೆ. ಮೊದಲು ಅವರಿಗೆ ಚಿಕಿತ್ಸೆ ಕೊಡಿಸಿ ಎಂದಿದ್ದಾರೆ.
ಇನ್ನು ದಯವಿಟ್ಟು ಸ್ವಲ್ಪ ಸಾಮಾನ್ಯ ಜ್ಞಾನವನ್ನು ಬಳಸಿ, ಇದೊಂದು ನಿದ್ರಾ ಸಮಸ್ಯೆ ಇರಬಹುದು. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು ನಿದ್ರಾಹೀನತೆ ಎಂದು ಕರೆಯಲಾಗುತ್ತದೆ. ಇದರ ಬಗ್ಗೆ ಬಡಾಯಿ ಕೊಚ್ಚಿಕೊಳ್ಳಬೇಡಿ. ರೋಗದಿಂದ ಬಳಲುತ್ತಿರುವ ನಿಮ್ಮ ನಾಯಕರಿಗೆ ಮೊದಲು ಚಿಕಿತ್ಸೆ ಕೊಡಿಸಿ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.