ಡೆಹ್ರಾಡೂನ್, ಮಾ 23 (DaijiworldNews/HR): ಉತ್ತರಾಖಂಡದ 11ನೇ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಅವರು ಬುಧವಾರ ಡೆಹ್ರಾಡೂನ್ ಪರೇಡ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪುಷ್ಕರ್ ಸಿಂಗ್ ಧಾಮಿ ಅವರು ಎರಡನೇ ಬಾರಿ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರಾಖಂಡ ನಿಯೋಜಿತ ಸಿಎಂ ಯೋಗಿ ಆದಿತ್ಯಾನಾಥ್, ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇನ್ನು ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಸಂಪುಟದ ಸಚಿವರೂ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿರುವುದಾಗಿದೆ.