ಬೆಂಗಳೂರು, ಮಾ. 23 (DaijiworldNews/SM): ಪುನಿತ್ ಅವರ 'ಜೇಮ್ಸ್' ಸಿನಿಮಾವನ್ನು ಸಿನಿಮಾ ಮಂದಿರಗಳಿಂದ ತೆರವುಗೊಳಿಸದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ. ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ಅಡ್ಡಿಪಡಿಸಲು ಅವಕಾಶವಿಲ್ಲ ಎಂದಿದ್ದಾರೆ.
ಸಿನಿಮಾ ಪ್ರದರ್ಶನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿ ಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯವರೊಂದಿಗೆ ಮಾತನಾಡಿದ್ದೇನೆ. ತೊಂದರೆಯಾಗಿರುವಲ್ಲಿ ಕೂಡಲೇ ಸರಿಪಡಿಸಿ, ಅನಾವಶ್ಯಕವಾಗಿ ಜೇಮ್ಸ್ ಸಿನಿಮಾವನ್ನು ಯಾರೂ ಚಿತ್ರಮಂದಿರಗಳಿಂದ ತೆಗೆಯತಕ್ಕದ್ದಲ್ಲ ಎಂದು ಎಚ್ಚರಿಸಿದ್ದಾರೆ.
ಸಂಬಂಧಪಟ್ಟ ನಿರ್ಮಾಪಕರು, ಚಿತ್ರಮಂದಿರದವರಿಗೆ ಇದನ್ನು ಸರಿಪಡಿಸುವ ಅಧಿಕಾರವಿದೆ' ಎಂದು ಹೇಳಿದರು.