ಬೆಂಗಳೂರು, ಮಾ 24 (DaijiworldNews/DB): ಆಮ್ ಆದ್ಮಿ ಪಕ್ಷಕ್ಕೆ ಕೆಲ ತಿಂಗಳ ಹಿಂದಷ್ಟೇ ಸೇರ್ಪಡೆಯಾಗಿದ್ದ ವಕೀಲ ಜಗದೀಶ್ ಕೆ.ಎನ್. ಗುರುವಾರ ಪಕ್ಷಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಸಿರುವ ಕುರಿತು ವೀಡಿಯೋ ಬಿಡುಗಡೆ ಮಾಡಿ, ರಾಜೀನಾಮೆ ಪತ್ರವನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರಿಗೆ ತಲುಪಿಸಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಎಎಪಿಯಲ್ಲಿ ಇದ್ದಷ್ಟು ದಿನ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದ್ದೇನೆ. ಆದರೆ ಪ್ರಸ್ತುತ ಆ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇನ್ನು ಮುಂದೆ ನನಗೂ ಪಕ್ಷಕ್ಕೂ ಯಾವುದೇ ಸಂಬಂಧವಿರುವುದಿಲ್ಲ. ಪಕ್ಷದ ಎಲ್ಲಾ ಪದಾಧಿಕಾರಿಗಳಿಗೂ ಈ ವಿಷಯವನ್ನು ವೀಡಿಯೋ ಮುಖಾಂತರ ಹೇಳುತ್ತಿದ್ದೇನೆ ಎಂದಿದ್ದಾರೆ.